Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, “ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ” ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಫಿಲಿಷ್ಟಿಯರು ಅವರ ಪೂಜಾರಿಗಳನ್ನೂ ಮಂತ್ರಗಾರರನ್ನೂ ಕರೆದು, “ಸರ್ವೇಶ್ವರನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಮರಳಿ ಅದರ ಸ್ಥಳಕ್ಕೆ ಹೇಗೆ ಕಳುಹಿಸುವುದು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿಹೇಳುವವರನ್ನೂ ಕರೆದು ಅವರಿಗೆ - ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ತಿರಿಗಿ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು? ತಿಳಿಸಿರಿ ಅನ್ನಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಫಿಲಿಷ್ಟಿಯರು ತಮ್ಮ ಅರ್ಚಕರನ್ನು ಮತ್ತು ಮಾಂತ್ರಿಕರನ್ನು ಕರೆದು, “ಯೆಹೋವನ ಪೆಟ್ಟಿಗೆಯನ್ನು ಏನು ಮಾಡೋಣ? ಇದನ್ನು ಮರಳಿ ಹಿಂದಕ್ಕೆ ಕಳುಹಿಸುವುದು ಹೇಗೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫಿಲಿಷ್ಟಿಯರು ಯಾಜಕರನ್ನೂ ಕಣಿಹೇಳುವವರನ್ನೂ ಕರೆದು, “ಯೆಹೋವ ದೇವರ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವುದು ನಮಗೆ ತಿಳಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:2
10 ತಿಳಿವುಗಳ ಹೋಲಿಕೆ  

ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.


ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.


ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.


ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು.


ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.


ಯೆಹೋವನ ಮಂಜೂಷವು ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳ ಕಾಲ ಇತ್ತು.


ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು