1 ಸಮುಯೇಲ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮರುತ್ತರವಾಗಿ ಅವರು, “ಇಸ್ರಯೇಲ್ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ನಿಮ್ಮ ಪಾಪಕ್ಕಾಗಿ ಪ್ರಾಯಶ್ಚಿತ್ತ ದ್ರವ್ಯದೊಡನೆ ಕಳುಹಿಸಬೇಕು. ಆಗ ಮಾತ್ರ ನೀವು ಗುಣಹೊಂದುವಿರಿ; ಅಲ್ಲದೆ ಅವರ ದೇವರ ಶಿಕ್ಷಾಹಸ್ತ ನಿಮ್ಮನ್ನು ಬಾಧಿಸುತ್ತಿದ್ದುದಕ್ಕೆ ಕಾರಣ ಗೊತ್ತಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ಇಸ್ರಾಯೇಲ್‍ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ; ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿದ್ದದ್ದಕ್ಕೆ ಕಾರಣವು ಗೊತ್ತಾಗುವದು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ, ಅದರ ಸಂಗಡ ನಿಶ್ಚಯವಾಗಿ ದೋಷಪರಿಹಾರ ಕಾಣಿಕೆಯನ್ನು ಕಳುಹಿಸಿರಿ, ಆಗ ನೀವು ಸ್ವಸ್ಥರಾಗುವಿರಿ. ಅವರ ಕೈ ನಿಮ್ಮನ್ನು ಬಿಟ್ಟುಹೋಗದೆ ಇರುವ ಕಾರಣ ನಿಮಗೆ ತಿಳಿಯುವುದು,” ಎಂದರು. ಅಧ್ಯಾಯವನ್ನು ನೋಡಿ |