Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐಗುಪ್ತರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವುದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈಜಿಪ್ಟ್ ನವರಂತೆ ಆಗಲಿ, ಫರೋಹನಂತೆ ಆಗಲಿ ನೀವೇಕೆ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳಬೇಕು? ಇಸ್ರಯೇಲರನ್ನು ಕಳುಹಿಸಲೊಲ್ಲದ ಈ ಈಜಿಪ್ಟ್ ನವರನ್ನು ಸರ್ವೇಶ್ವರನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಐಗುಪ್ತ್ಯರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಫರೋಹನಂತೆ ಮತ್ತು ಈಜಿಪ್ಟಿನವರಂತೆ ಮೊಂಡರಾಗಬೇಡಿ. ದೇವರು ಈಜಿಪ್ಟಿನವರನ್ನು ದಂಡಿಸಿದನು. ಆದ್ದರಿಂದ ಇಸ್ರೇಲರನ್ನು ಕಳುಹಿಸಿಕೊಡುವಂತೆ ಈಜಿಪ್ಟಿನವರನ್ನು ಬಲವಂತ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಜಿಪ್ಟಿನವರೂ, ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ, ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವುದೇನು? ದೇವರು ಅವರ ಮಧ್ಯದಲ್ಲಿ ಆಶ್ಚರ್ಯಕರವಾದ ಕ್ರಿಯೆಗಳನ್ನು ನಡಿಸಿದಾಗ, ಅವರು ಇಸ್ರಾಯೇಲರನ್ನು ಅವರು ಹೋಗುವಹಾಗೆ ಕಳುಹಿಸಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:6
16 ತಿಳಿವುಗಳ ಹೋಲಿಕೆ  

ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.


ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.


ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಆದರೆ ಆನೆಕಲ್ಲು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಠಿಣಮಾಡಿಕೊಂಡು ಇನ್ನೂ ಪಾಪ ಮಾಡಿದರು.


ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ಆದರೂ ಫರೋಹನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಜನರಿಗೆ ಹೋಗುವುದಕ್ಕೆ ಅಪ್ಪಣೆ ಕೊಡಲಿಲ್ಲ.


ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.


ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು