Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಕಿರ್ಯತ್ಯಾರೀಮಿನವರು ಬಂದು ಸರ್ವೇಶ್ವರನ ಮಂಜೂಷವನ್ನು ತೆಗೆದುಕೊಂಡು ಹೋದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿ ಅದನ್ನು ಇಟ್ಟು, ಅವನ ಮಗ ಎಲ್ಲಾಜಾರನನ್ನು ಅದರ ಸೇವೆಗಾಗಿ ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಕಿರ್ಯತ್ಯಾರೀವಿುನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕಿರ್ಯತ್ಯಾರೀಮಿನ ಜನರು ಬಂದು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು. ಯೆಹೋವನ ಪೆಟ್ಟಿಗೆಯನ್ನು ಬೆಟ್ಟದ ಮೇಲಿದ್ದ ಅಬೀನಾದಾಬನ ಮನೆಯಲ್ಲಿಟ್ಟರು. ಯೆಹೋವನ ಪೆಟ್ಟಿಗೆಯನ್ನು ಕಾಯುವುದಕ್ಕಾಗಿ ಅಬೀನಾದಾಬನ ಮಗನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕಿರ್ಯತ್ ಯಾರೀಮಿನವರು ಬಂದು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡು, ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟರು. ಅವನ ಪುತ್ರನಾದ ಎಲಿಯಾಜರನನ್ನು ಯೆಹೋವ ದೇವರ ಮಂಜೂಷವನ್ನು ಕಾಯಲು ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:1
9 ತಿಳಿವುಗಳ ಹೋಲಿಕೆ  

ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.


ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು.


ಅದರ ಮೇರೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿರ್ಯಾತ್ ಬಾಳ್ ಎನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯಾತ್ಯಾರೀಮ್ ಎಂಬ ಪಟ್ಟಣದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ಪಡುವಣ ಮೇರೆ.


ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.


ಮಂಜೂಷವು ಕಿರ್ಯಾತ್ಯಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು.


ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು