Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೇಗೆಂದರೆ, ಸಮುವೇಲನು ಬಲಿಯನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸಮೀಪಿಸಿದರು. ಸರ್ವೇಶ್ವರ ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ, ಇಸ್ರಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸಮುವೇಲನು ಯಜ್ಞವನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕೋಸ್ಕರ ಸಮೀಪಿಸಲಾಗಿ ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲ್ಯರಿಗೆ ಸೋತು ಓಡಿಹೋಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಮುವೇಲನು ಕುರಿಮರಿಯನ್ನು ಸಮರ್ಪಿಸುವಾಗ, ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಬಂದರು. ಆದರೆ ಯೆಹೋವನು ಫಿಲಿಷ್ಟಿಯರ ಹತ್ತಿರ ದೊಡ್ಡ ಗುಡುಗನ್ನು ಉಂಟುಮಾಡಿದನು. ಗುಡುಗಿನ ಶಬ್ದವು ಫಿಲಿಷ್ಟಿಯರಲ್ಲಿ ಕಳವಳವನ್ನೂ ಭಯವನ್ನೂ ಉಂಟುಮಾಡಿತು. ಅವರ ಸೇನಾಧಿಪತಿಗಳಿಗೆ ಅವರನ್ನು ಹತೋಟಿಯಲ್ಲಿಡಲಾಗಲಿಲ್ಲ. ಆದಕಾರಣ ಇಸ್ರೇಲರು ಫಿಲಿಷ್ಟಿಯರನ್ನು ಯುದ್ಧದಲ್ಲಿ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಮುಯೇಲನು ದಹನಬಲಿಯನ್ನು ಅರ್ಪಿಸುವಾಗ, ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸಮೀಪಕ್ಕೆ ಬಂದರು. ಆಗ ಯೆಹೋವ ದೇವರು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಕಳವಳಗೊಳಿಸಿ, ಇಸ್ರಾಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:10
21 ತಿಳಿವುಗಳ ಹೋಲಿಕೆ  

“ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.”


ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.


ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.


ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.


ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.


ಇಸ್ರಾಯೇಲ್ಯರಾದರೋ ಮಿಚ್ಪೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು.


ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.


ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.


ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.


ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.


ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.


ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು