Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲ್ಯರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆ ಎಂದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲರು ಬಹಳವಾಗಿ ಭಯಪಟ್ಟು ಸಮುವೇಲನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆಂಬುದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರುಗಳು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟರು. ಇದನ್ನು ತಿಳಿದ ಇಸ್ರಯೇಲರು ಬಹಳವಾಗಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರು ವಿುಚ್ಪೆಯಲ್ಲಿ ಕೂಡಿಬಂದಿದ್ದಾರೆಂಬದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ಪ್ರಭುಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲ್ಯರು ಬಹಳವಾಗಿ ಭಯಪಟ್ಟು ಸಮುವೇಲನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿರುವುದು ಫಿಲಿಷ್ಟಿಯರಿಗೆ ಗೊತ್ತಾಯಿತು. ಫಿಲಿಷ್ಟಿಯ ಅಧಿಪತಿಗಳು ಇಸ್ರೇಲರ ವಿರುದ್ಧ ಹೋರಾಡಲು ಹೊರಟರು. ಫಿಲಿಷ್ಟಿಯರು ಬರುತ್ತಿರುವುದನ್ನು ಕೇಳಿ ಇಸ್ರೇಲರು ಭಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲರು ಮಿಚ್ಪೆಯಲ್ಲಿ ಕೂಡಿ ಬಂದರೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರ ಅಧಿಪತಿಗಳು ಇಸ್ರಾಯೇಲರಿಗೆ ವಿರೋಧವಾಗಿ ಏರಿ ಬಂದರು. ಆಗ ಇಸ್ರಾಯೇಲರು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:7
4 ತಿಳಿವುಗಳ ಹೋಲಿಕೆ  

ಸೌಲನೂ ಎಲ್ಲಾ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಎದೆಗುಂದಿದವರಾಗಿ ಬಹಳ ಭಯಪಟ್ಟರು.


ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.


ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು