Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ಸಮುವೇಲನಿಗೆ, “ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀವು ನಮಗೋಸ್ಕರ ಪ್ರಾರ್ಥನೆಮಾಡಿ, ಸುಮ್ಮನಿರಬೇಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರು ಸಮುವೇಲನಿಗೆ, “ನಮ್ಮ ದೇವರಾದ ಯೆಹೋವನಲ್ಲಿ ನಮಗಾಗಿ ಪ್ರಾರ್ಥಿಸು! ನಿಲ್ಲಿಸಬೇಡ! ಫಿಲಿಷ್ಟಿಯರಿಂದ ನಮ್ಮನ್ನು ರಕ್ಷಿಸಲು ಯೆಹೋವನಲ್ಲಿ ಬೇಡಿಕೊ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಸಮುಯೇಲನಿಗೆ, “ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವವರೆಗೆ, ನೀನು ನಮಗೋಸ್ಕರವಾಗಿ ಪ್ರಾರ್ಥನೆಮಾಡಿ ಮೊರೆಯಿಡುವುದನ್ನು ನಿಲ್ಲಿಸಬೇಡ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:8
7 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.


ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು