Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ; ಆಗ ಆತನು ನಿಮ್ಮನ್ನು ಲಕ್ಷಿಸುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರಾಜನು ಬೇಕೆಂದು ಕೇಳಿಕೊಂಡದ್ದಕ್ಕಾಗಿ ಗೋಳಾಡುವಿರಿ. ಆದರೆ ಆಗ ಯೆಹೋವನು ನಿಮಗೆ ಉತ್ತರಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ನಿಮಗೆ ಆಯ್ದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ, ಆದರೆ ಆ ದಿವಸದಲ್ಲಿ ಯೆಹೋವ ದೇವರು ನಿಮಗೆ ಕಿವಿಗೊಡುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:18
13 ತಿಳಿವುಗಳ ಹೋಲಿಕೆ  

ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.


ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು


ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.


ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಆಲೈಸುವನೋ?


ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು.


ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?


ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು