Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ನ್ಯಾಯಗಳನ್ನು ತೀರಿಸಿ, ನಮಗೆ ಮುಂದಾಗಿ ಹೊರಟು, ನಮ್ಮ ಪರವಾಗಿ ಯುದ್ಧಮಾಡುವ ಒಬ್ಬ ಅರಸನು ಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ನಾವು ಇತರ ಅನ್ಯಜನಾಂಗಗಳಂತೆ ಆಗುವೆವು. ನಮ್ಮ ರಾಜನು ನಮ್ಮನ್ನು ಮುನ್ನಡೆಸುವನು. ಅವನು ನಮ್ಮೊಡನೆ ಬಂದು ನಮಗೋಸ್ಕರ ಹೋರಾಡುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾವು ಸಕಲ ರಾಷ್ಟ್ರಗಳ ಹಾಗೆ ಇರಬೇಕು. ನಮ್ಮ ಅರಸನು ನಮಗೆ ನ್ಯಾಯತೀರಿಸುವನು. ಅವನು ನಮ್ಮ ಮುಂದೆ ಹೊರಟು, ನಮ್ಮ ಪರವಾಗಿ ಯುದ್ಧಗಳನ್ನು ನಡೆಸುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:20
13 ತಿಳಿವುಗಳ ಹೋಲಿಕೆ  

ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.


ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.


ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.


ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.


ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.


ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.


ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.


ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು