Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದ್ದರಿಂದ ಇಸ್ರಾಯೇಲರ ಹಿರಿಯರೆಲ್ಲರೂ ಸೇರಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಇಸ್ರಯೇಲರ ಹಿರಿಯರೆಲ್ಲರೂ ಕೂಡಿ ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಇಸ್ರೇಲರ ಹಿರಿಯರೆಲ್ಲ ಒಟ್ಟುಗೂಡಿದರು. ಅವರು ಸಮುವೇಲನನ್ನು ಭೇಟಿಮಾಡಲು ರಾಮಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು, ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:4
8 ತಿಳಿವುಗಳ ಹೋಲಿಕೆ  

ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.


ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.


ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.


ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ,


ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.


ಅಬ್ನೇರನು ಇಸ್ರಾಯೇಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮೊದಲು ಅಪೇಕ್ಷಿಸಿದಂತೆಯೇ ಈಗ ಮಾಡಿರಿ.


ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು