1 ಸಮುಯೇಲ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ತಾವಂತೂ ಮುದುಕರಾದಿರಿ; ನಿಮ್ಮ ಮಕ್ಕಳು ನಿಮ್ಮ ಮಾರ್ಗದಲ್ಲಿ ನಡೆಯುವುದಿಲ್ಲ. ಆದುದರಿಂದ ಬೇರೆ ಎಲ್ಲ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿ; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಆದದರಿಂದ ಬೇರೆ ಎಲ್ಲಾ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇವಿುಸು; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹಿರಿಯರು ಸಮುವೇಲನಿಗೆ, “ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನೀನು ವೃದ್ಧನಾದೆ, ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವುದಿಲ್ಲ. ಈಗ ಎಲ್ಲ ರಾಷ್ಟ್ರಗಳ ಹಾಗೆ ನಮಗೆ ನ್ಯಾಯತೀರಿಸುವುದಕ್ಕೆ ಒಬ್ಬ ಅರಸನನ್ನು ನೇಮಿಸು,” ಎಂದರು. ಅಧ್ಯಾಯವನ್ನು ನೋಡಿ |