1 ಸಮುಯೇಲ 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಬಲಿಭೋಜನಕ್ಕಾಗಿ ಗುಡ್ಡಕ್ಕೆ ಹೋಗುವ ಮೊದಲೇ ನೀವು ಊರೊಳಕ್ಕೆ ಹೋದರೆ ಸಿಕ್ಕುವರು. ಅವರು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಅವರು ಹೋಗಿ ಬಲಿ ಆಹಾರವನ್ನು ಆಶೀರ್ವದಿಸುತ್ತಾರೆ; ಅನಂತರವೇ ಆಮಂತ್ರಿತರು ಊಟಮಾಡುವುದು. ಈಗಲೇ ಹೋಗಿ; ಅವನು ಸಿಕ್ಕುವ ಸಮಯ ಇದೇ,” ಎಂದರು ಆ ಮಹಿಳೆಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿ ಹೋಗುವವರೆಗೆ ಜನರು ಊಟಮಾಡುವದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ; ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ; ಅವನು ಸಿಕ್ಕುವ ಸಮಯ ಇದೇ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ಪಟ್ಟಣದೊಳಕ್ಕೆ ಹೋದರೆ ಅವನನ್ನು ಕಾಣಬಹುದು. ನೀವು ಬೇಗನೆ ನೋಡಬೇಕೆಂದಿದ್ದರೆ, ಅವನು ಊಟ ಮಾಡುವುದಕ್ಕಾಗಿ ಆರಾಧನೆಯ ಸ್ಥಳಕ್ಕೆ ಹೋಗುವುದಕ್ಕಿಂತ ಮೊದಲೇ ಅವನನ್ನು ಕಾಣಬೇಕು. ದರ್ಶಿಯು ಯಜ್ಞವನ್ನು ಆಶೀರ್ವದಿಸಬೇಕಾಗಿರುವುದರಿಂದ ಅವನು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಆದ್ದರಿಂದ ನೀವು ಬೇಗನೆ ಹೋದರೆ ಅವನನ್ನು ಕಾಣಬಹುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ಗುಡ್ಡದ ಮೇಲೆ ತಿನ್ನಲು ಹೋಗುವರು. ಅವನು ಬರುವವರೆಗೂ ಜನರು ಏನೂ ತಿನ್ನುವುದಿಲ್ಲ. ಅವನು ಬಂದು ಅರ್ಪಣೆಯನ್ನು ಆಶೀರ್ವದಿಸುವನು. ಅನಂತರವೇ ಆಮಂತ್ರಿತರು ಊಟಮಾಡುವರು. ಈಗಲೇ ಹೋಗಿರಿ. ಈ ವೇಳೆಯಲ್ಲಿ ಅವನನ್ನು ಕಂಡುಕೊಳ್ಳುವಿರಿ,” ಎಂದರು. ಅಧ್ಯಾಯವನ್ನು ನೋಡಿ |