1 ಸಮುಯೇಲ 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು; ನೀನು ಅವನನ್ನು ಇಸ್ರಾಯೇಲ್ಯರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ ಎಂದು ತಿಳಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.