Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ; ಅವು ಈಗಾಗಲೇ ಸಿಕ್ಕಿವೆ. ಮತ್ತು ಇಸ್ರಯೇಲರ ಆಶೋತ್ತರವೆಲ್ಲ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಮತ್ತು ಇಸ್ರಾಯೇಲ್ಯರ ಶ್ರೇಷ್ಠವಸ್ತುಗಳೆಲ್ಲಾ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮೂರು ದಿನಗಳ ಹಿಂದೆ ಕಳೆದು ಹೋದ ನಿನ್ನ ಕತ್ತೆಗಳಿಗಾಗಿ ಚಿಂತಿಸಬೇಡ. ಅವುಗಳೆಲ್ಲ ಸಿಕ್ಕಿವೆ. ಈಗ ಇಸ್ರೇಲರಿಗೆಲ್ಲ ನೀನು ಬೇಕಾಗಿರುವೆ. ಅವರಿಗೆ ನೀನು ಮತ್ತು ನಿನ್ನ ತಂದೆಯ ಕುಟುಂಬದ ಜನರೆಲ್ಲ ಬೇಕಾಗಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಂದಿಗೆ ಮೂರನೆಯ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ. ಏಕೆಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು? ಅದು ನಿನ್ನ ಮೇಲೆಯೇ ಅಲ್ಲವೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:20
11 ತಿಳಿವುಗಳ ಹೋಲಿಕೆ  

ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.


ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.


ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು.


ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೊಸ್ಕರ ನನ್ನ ಸ್ವಂತ ಸೊತ್ತಿನಿಂದ


ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;


ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.


ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.


ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು