1 ಸಮುಯೇಲ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆಹೋದವು. ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಒಂದು ದಿವಸ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದದರಿಂದ ಅವನು ತನ್ನ ಮಗನಾದ ಸೌಲನಿಗೆ - ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವದಕ್ಕೆ ಹೋಗು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಒಂದು ದಿನ ಕೀಷನ ಕತ್ತೆಗಳು ಕಳೆದುಹೋದವು. ಆದ್ದರಿಂದ ಕೀಷನು ಸೌಲನಿಗೆ, “ಸೇವಕನೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದ್ದರಿಂದ ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರೆದುಕೊಂಡು, ಕತ್ತೆಗಳನ್ನು ಹುಡುಕಲು ಹೋಗಬೇಕು,” ಎಂದನು. ಅಧ್ಯಾಯವನ್ನು ನೋಡಿ |