1 ಸಮುಯೇಲ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು” ಅಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕಡೆಗೆ ಅವರು ಚೂಫ್ ನಾಡಿಗೆ ಬಂದರು. ಅಲ್ಲಿ ಅವನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡೆ; ನಮ್ಮ ತಂದೆ ಈ ಕತ್ತೆಗಳ ಚಿಂತೆಯನ್ನೇ ಬಿಟ್ಟು ನಮ್ಮ ಚಿಂತೆಯಲ್ಲಿ ಇರಬಹುದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕಡೆಗೆ ಅವರು ಚೂಫ್‍ದೇಶಕ್ಕೆ ಬಂದಾಗ ಅವನು ತನ್ನ ಆಳಿಗೆ - ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿದ್ದಾನು ಅನ್ನಲು ಆ ಆಳು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕೊನೆಗೆ, ಸೌಲನು ಮತ್ತು ಅವನ ಸೇವಕನು ಚೂಫ್ ಎಂಬ ಹೆಸರಿನ ಪಟ್ಟಣಕ್ಕೆ ಬಂದರು. ಸೌಲನು ಸೇವಕನಿಗೆ, “ನಾವು ಮರಳಿ ಹೋಗೋಣ. ನಮ್ಮ ತಂದೆಯು ಕತ್ತೆಗಳ ಬಗ್ಗೆ ಯೋಚಿಸುವುದನ್ನು ಬಿಟ್ಟು ನಮ್ಮ ಬಗ್ಗೆ ಚಿಂತಿಸಲಾರಂಭಿಸುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಚೂಫ್ ಎಂಬ ದೇಶಕ್ಕೆ ಬಂದಾಗ, ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ, “ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು, ನಮಗೋಸ್ಕರ ಚಿಂತೆ ಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ,” ಎಂದನು. ಅಧ್ಯಾಯವನ್ನು ನೋಡಿ |