2 ಅರಸುಗಳು 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಎಲೀಯನು, “ನಾನು ದೈವಪುರುಷನಾಗಿ ಇರುವುದು ನಿಜವಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕೆ ಎಲೀಯನು - ನಾನು ದೇವರ ಮನುಷ್ಯನಾಗಿರುವದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ ಅಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಲೀಯನು ಐವತ್ತು ಮಂದಿಯ ಸೇನಾಧಿಪತಿಗೆ, “ನಾನು ಒಬ್ಬ ದೇವಮನುಷ್ಯನಾಗಿರುವದಾದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಸೈನಿಕರನ್ನೂ ನಾಶಗೊಳಿಸಲಿ!” ಎಂದು ಉತ್ತರಿಸಿದನು. ಆಗ ಬೆಂಕಿಯು ಪರಲೋಕದಿಂದ ಬಂದು ಆ ಸೇನಾಧಿಪತಿಯನ್ನು ಮತ್ತು ಅವನ ಐವತ್ತು ಮಂದಿ ಸೈನಿಕರನ್ನು ನಾಶಗೊಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕೆ ಎಲೀಯನು ಪ್ರಧಾನನಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. ಅಧ್ಯಾಯವನ್ನು ನೋಡಿ |