2 ಅರಸುಗಳು 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಮೇಲೆ ಅರಸನು ಇನ್ನೊಬ್ಬ ಪಂಶಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳ ಸಮೇತ ಕಳುಹಿಸಿದನು. ಇವನು ಬಂದು ಎಲೀಯನಿಗೆ, “ದೈವಪುರುಷರೇ, ಬೇಗನೆ ಇಳಿದು ಬನ್ನಿ; ಅರಸರು ನಿಮ್ಮನ್ನು ಕರೆಯುತ್ತಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ - ದೇವರ ಮನುಷ್ಯನೇ, ಬೇಗನೆ ಇಳಿದು ಬಾ; ಅರಸನು ನಿನ್ನನ್ನು ಕರೆಯುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಹಜ್ಯನು ಬೇರೊಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಜನರನ್ನು ಎಲೀಯನ ಬಳಿಗೆ ಕಳುಹಿಸಿದನು. ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ತ್ವರಿತವಾಗಿ ಕೆಳಗಿಳಿದು ಬಾ!’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ತಿರುಗಿ ಅರಸನು ಎಲೀಯನ ಬಳಿಗೆ ಐವತ್ತು ಮಂದಿಯ ಪ್ರಧಾನನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ, “ದೇವರ ಮನುಷ್ಯನೇ, ‘ಬೇಗನೆ ಇಳಿದು ಬಾ,’ ಎಂದು ಅರಸನು ಹೇಳುತ್ತಾನೆ,” ಎಂದನು. ಅಧ್ಯಾಯವನ್ನು ನೋಡಿ |