Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಕಾಶದಿಂದ ಬೆಂಕಿಬಿದ್ದು ನನಗೆ ಮುಂದೆ ಬಂದ ಆ ಇಬ್ಬರು ಪಂಚಾಶದಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲವೆ? ನನ್ನ ಪ್ರಾಣವಾದರೂ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದೆಂದು ಮಾನ್ಯವಾಗಲಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಕಾಶದಿಂದ ಬೆಂಕಿಬಿದ್ದು ಮುಂಚೆ ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ; ನನ್ನ ಪ್ರಾಣವಾದರೋ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪರಲೋಕದಿಂದ ಕೆಳಗಿಳಿದು ಬಂದ ಬೆಂಕಿಯು ಮೊದಲ ಇಬ್ಬರು ಸೇನಾಧಿಪತಿಗಳನ್ನೂ ಅವರ ಐವತ್ತು ಜನರನ್ನೂ ನಾಶಗೊಳಿಸಿತು. ಆದರೆ ಈಗ ನಮ್ಮ ಮೇಲೆ ಕನಿಕರ ತೋರಿ ಜೀವಿಸಲು ಅವಕಾಶ ಮಾಡಿಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ, ಅವರ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ,” ಎಂದು ಹೇಳಿ ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:14
11 ತಿಳಿವುಗಳ ಹೋಲಿಕೆ  

ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.


ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.


ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.


ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.


ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು


ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.


ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು