Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಮಾರಿಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಜೆಸ್ರೀಲಿನ ಅಧಿಕಾರಿಗಳಾದ ಹಿರಿಯರಿಗೂ ರಾಜಪುತ್ರಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಮಾರ್ಯಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತುಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ ರಾಜಪುತ್ರಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಯೇಹುವು ಇಜ್ರೇಲಿನ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿದನು. ಅಹಾಬನ ಮಕ್ಕಳನ್ನು ಬೆಳೆಸಿದ ಪಾಲಕರಿಗೂ ಅವನು ಪತ್ರಗಳನ್ನು ಕಳುಹಿಸಿದನು. ಯೇಹುವು ಪತ್ರಗಳಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದರು, ಯೇಹುವು ಸಮಾರ್ಯದಲ್ಲಿರುವ ಇಜ್ರೆಯೇಲ್ ಊರಿನ ಪ್ರಧಾನರಿಗೂ ಹಿರಿಯರಿಗೂ ಅಹಾಬನ ಮಕ್ಕಳನ್ನು ಪೋಷಿಸುವವರಿಗೂ ಪತ್ರಗಳನ್ನು ಬರೆದು, ಸಮಾರ್ಯಕ್ಕೆ ಕಳುಹಿಸಿದನು. ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:1
14 ತಿಳಿವುಗಳ ಹೋಲಿಕೆ  

ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು” ಎಂದನು.


ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.


ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, “ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು” ಎಂದು ಹೇಳಿದಳು.


ಒಮ್ರಿಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಅಹಾಬನು ಅರಸನಾದನು.


ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.


ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;


ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.


ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?


ಕರ್ಮೆಲ್, ಜೀಫ್, ಯುಟ್ಟಾ,


ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.


ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು