2 ಅರಸುಗಳು 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಗೋ, ಅಹಾಬನ ಮನೆಯವರನ್ನುಕುರಿತು ಸರ್ವೇಶ್ವರ ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಸರ್ವೇಶ್ವರ ತಮ್ಮ ದಾಸನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರಷ್ಟೇ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಗೋ ಯೆಹೋವನು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವವೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಹೇಳಿದ್ದೆಲ್ಲವೂ ಸಂಭವಿಸುತ್ತದೆ ಎಂಬುದನ್ನು ನೀವು ತಿಳಿದಿರಬೇಕು. ಅಹಾಬನ ಕುಟುಂಬಕ್ಕೆ ಇವುಗಳು ಸಂಭವಿಸುತ್ತವೆಯೆಂದು ಯೆಹೋವನು ಎಲೀಯನ ಮೂಲಕ ತಿಳಿಸಿದ್ದನು. ಅಂತೆಯೇ ಆತನು ಮಾಡಿದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಅಹಾಬನ ಮನೆಯನ್ನು ಕುರಿತು ಹೇಳಿದ ಯೆಹೋವ ದೇವರ ಮಾತುಗಳಲ್ಲಿ ಒಂದೂ ವ್ಯರ್ಥವಾಗುವುದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಯೆಹೋವ ದೇವರು ತಮ್ಮ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |