Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ ಅವನು ಜೆಸ್ರೀಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು’ ಒಬ್ಬನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅನಂತರ ಅವನು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತವಿುತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಜ್ರೇಲಿನಲ್ಲಿ ವಾಸಿಸುತ್ತಿದ್ದ ಅಹಾಬನ ಕುಟುಂಬದ ಉಳಿದವರನ್ನೆಲ್ಲ ಯೇಹು ಕೊಂದುಹಾಕಿದನು. ಅಹಾಬನ ಆಪ್ತಮಿತ್ರರು, ಯಾಜಕರು ಮತ್ತು ಪ್ರಮುಖರನ್ನೆಲ್ಲ ಯೇಹುವು ಕೊಂದುಹಾಕಿದನು. ಅಹಾಬನ ಜನರಲ್ಲಿ ಯಾರನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ಪ್ರಕಾರ ಯೇಹುವು ಇಜ್ರೆಯೇಲ್ ಪಟ್ಟಣದಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:11
25 ತಿಳಿವುಗಳ ಹೋಲಿಕೆ  

ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.


ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.


ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು’ ಅನ್ನುತ್ತಾನೆ


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.


ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.


ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.


ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.


ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.


ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.


ಕರ್ಮೆಲ್, ಜೀಫ್, ಯುಟ್ಟಾ,


ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,


ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.


ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.


ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.


ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು.


ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು