Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಸಜೀವಿಗಳಾಗಿ ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೇಹುವು ತನ್ನ ಸೇವಕರಿಗೆ - ಅವರನ್ನು ಸಜೀವಿಗಳಾಗಿ ಹಿಡಿಯಿರಿ ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಯೇಹುವು ತನ್ನ ಜನರಿಗೆ, “ಅವರನ್ನು ಜೀವಸಹಿತ ಹಿಡಿದು ತನ್ನಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನ ಬಂಧುಗಳನ್ನು ಜೀವಸಹಿತ ಹಿಡಿದು ತಂದರು. ಅಲ್ಲಿ ನಲವತ್ತೆರಡು ಮಂದಿ ಜನರಿದ್ದರು. ಯೇಹು ಬೆತ್‌ಎಕೇಡ್‌ನ ಬಾವಿಯ ಹತ್ತಿರ ಅವರನ್ನು ಕೊಂದುಹಾಕಿದನು. ಯೇಹುವು ಯಾರನ್ನೂ ಜೀವಸಹಿತ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವನು, “ಅವರನ್ನು ಜೀವದಿಂದ ಹಿಡಿಯಿರಿ,” ಎಂದು ಹೇಳಿದ್ದರಿಂದ ಕುರುಬರು ಇವರನ್ನು ಜೀವದಿಂದ ಹಿಡಿದು, ಉಣ್ಣೆ ಕತ್ತರಿಸುವ ಮನೆಯ ಬಾವಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನಾದರೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:14
11 ತಿಳಿವುಗಳ ಹೋಲಿಕೆ  

ಅಹಜ್ಯನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.


ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು.


ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,


ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.


ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು