Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ನನ್ನ ಜೊತೆಯಲ್ಲಿ ಬಂದು ಸರ್ವೇಶ್ವರನಲ್ಲಿ ನನಗಿರುವ ಶ್ರದ್ಧೆಯನ್ನು ನೋಡು,” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡು ನನ್ನ ಜೊತೆಯಲ್ಲಿ ಬಂದು ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ಕೈ ಹಿಡಿದು ತನ್ನ ರಥದಲ್ಲಿ ಕರಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಹು, “ನನ್ನ ಸಂಗಡ ಬಾ. ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೀನು ನೋಡುವಿಯಂತೆ” ಎಂದು ಹೇಳಿದನು. ಯೇಹುವಿನ ರಥದಲ್ಲಿ ಯೆಹೋನಾದಾಬನೂ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನೀನು ನನ್ನ ಸಂಗಡ ಬಂದು ಯೆಹೋವ ದೇವರಿಗೋಸ್ಕರ ನನಗುಂಟಾದ ಆಸಕ್ತಿಯನ್ನು ನೋಡು,” ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:16
13 ತಿಳಿವುಗಳ ಹೋಲಿಕೆ  

ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.


ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.


“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ, ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.


ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು