Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಮಾರಿಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಮಾರ್ಯವನ್ನು ಸೇರಿದನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಹು ಸಮಾರ್ಯಕ್ಕೆ ಬಂದು, ಅಹಾಬನ ಕುಟುಂಬದಲ್ಲಿ ಜೀವಸಹಿತರಾಗಿ ಸಮಾರ್ಯದಲ್ಲಿ ಉಳಿದಿದ್ದವರನ್ನೆಲ್ಲಾ ಕೊಂದುಹಾಕಿದನು. ಯೆಹೋವನು ಎಲೀಯನಿಗೆ ಹೇಳಿದ್ದಂತೆಯೇ ಯೇಹು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಹುವು ಸಮಾರ್ಯಕ್ಕೆ ಬಂದ ತರುವಾಯ ಸಮಾರ್ಯದಲ್ಲಿ ಅಹಾಬನಿಗೆ ಉಳಿದವರೆಲ್ಲರನ್ನು ಎಲೀಯನಿಗೆ ಹೇಳಿದ ಯೆಹೋವ ದೇವರ ವಾಕ್ಯದ ಪ್ರಕಾರ ಅವರನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:17
8 ತಿಳಿವುಗಳ ಹೋಲಿಕೆ  

ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.


ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.


ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು