Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತರುವಾಯ ಅವನು ಎಲ್ಲಾ ಜನರನ್ನು ಕೂಡಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಪೂಜಿಸಿದನು; ಯೇಹುವಾದರೋ ಅಧಿಕವಾಗಿ ಪೂಜಿಸಬೇಕೆಂದು ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತರುವಾಯ ಅವನು ಎಲ್ಲಾ ಜನರನ್ನು ಕೂಡಿಸಿ ಅವರಿಗೆ - ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು; ಯೇಹುವಾದರೋ ಅಧಿಕವಾಗಿ ಸೇವಿಸಬೇಕೆಂದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಹು ಜನರನ್ನೆಲ್ಲ ಒಟ್ಟಾಗಿ ಸೇರಿಸಿ, “ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು. ಆದರೆ ಯೇಹು ಬಾಳನನ್ನು ಅಧಿಕವಾಗಿ ಸೇವಿಸುತ್ತಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ, “ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು. ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:18
9 ತಿಳಿವುಗಳ ಹೋಲಿಕೆ  

ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ?


ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.


ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು