Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದುದರಿಂದ ನೀವು ಬಾಳ್ ದೇವತೆಯ ಎಲ್ಲಾ ಪ್ರವಾದಿಗಳನ್ನೂ ಭಕ್ತರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿ; ನಾನು ಬಾಳ್ ದೇವತೆಗಾಗಿ ಮಹಾಬಲಿಯನ್ನು ಸಮರ್ಪಿಸಬೇಕೆಂದಿರುತ್ತೇನೆ. ಆದುದರಿಂದ ಅವರಲ್ಲಿ ಒಬ್ಬನೂ ಬಾರದಿರಕೂಡದು, ಬಾರದವನು ಸಾಯಬೇಕು,” ಎಂದು ಹೇಳಿದನು. ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದದರಿಂದ ನೀವು ಬಾಳನ ಎಲ್ಲಾ ಪ್ರವಾದಿಗಳನ್ನೂ ಭಕ್ತರನ್ನೂ ಯಾಜಕರನ್ನೂ ನನ್ನ ಬಳಿಗೆ ಕರಕೊಂಡು ಬನ್ನಿರಿ; ನಾನು ಬಾಳನಿಗೋಸ್ಕರ ಮಹಾಯಜ್ಞವನ್ನು ಸಮರ್ಪಿಸಬೇಕೆಂದಿರುತ್ತೇನಾದದರಿಂದ ಅವರಲ್ಲಿ ಒಬ್ಬನೂ ಬಾರದಿರಕೂಡದು; ಬಾರದವನು ಸಾಯಬೇಕು ಎಂದು ಹೇಳಿದನು. ಅವನು ಬಾಳನ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಾಳನ ಎಲ್ಲಾ ಯಾಜಕರನ್ನೂ ಪ್ರವಾದಿಗಳನ್ನೂ ಕರೆಯಿರಿ. ಬಾಳನನ್ನು ಆರಾಧಿಸುವ ಜನರೆಲ್ಲರನ್ನೂ ಒಟ್ಟಾಗಿ ಕರೆಯಿರಿ. ಯಾರೂ ಈ ಸಭೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ. ನಾನು ಬಾಳನಿಗೆ ಮಹಾಯಜ್ಞವನ್ನು ಅರ್ಪಿಸಬೇಕೆಂದಿದ್ದೇನೆ. ಈ ಸಭೆಗೆ ಯಾರಾದರೂ ಬಾರದೆ ಇದ್ದರೆ ಅವರನ್ನು ನಾನು ಕೊಂದುಹಾಕುತ್ತೇನೆ!” ಎಂದು ಹೇಳಿದನು. ಆದರೆ ಅದು ಯೇಹುವಿನ ತಂತ್ರವಾಗಿತ್ತು. ಬಾಳನ ಭಕ್ತರನ್ನು ನಾಶಪಡಿಸಬೇಕೆಂಬುದೇ ಅವನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಬಾಳನ ಸಮಸ್ತ ಪ್ರವಾದಿಗಳನ್ನೂ, ಅವನ ಸಮಸ್ತ ಸೇವಕರನ್ನೂ, ಅವನ ಸಮಸ್ತ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ. ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು,” ಎಂದನು. ಏಕೆಂದರೆ ಯೇಹುವು ಬಾಳನನ್ನು ಸೇವಿಸುವವರನ್ನು ನಾಶಮಾಡುವಂತೆ ಇದನ್ನು ತಂತ್ರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:19
11 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.


ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.


ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ?


ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.


ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು