Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಯೇಹುವು ರೇಕಾಬನ ಮಗ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯ ಭಕ್ತರಿಗೆ, “ಸರ್ವೇಶ್ವರನ ಭಕ್ತರು ನಿಮ್ಮ ಮಧ್ಯೆ ಬಂದಿರುತ್ತಾರೋ ವಿಚಾರಿಸಿ ನೋಡಿ; ಬಾಳನ ಭಕ್ತರು ಮಾತ್ರ ಇಲ್ಲಿರಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳನ ಭಕ್ತರಿಗೆ - ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ ವಿಚಾರಿಸಿ ನೋಡಿರಿ; ಬಾಳನ ಭಕ್ತರು ಮಾತ್ರ ಅಲ್ಲಿರಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯೇಹು ಮತ್ತು ರೇಕಾಬನ ಮಗನಾದ ಯೆಹೋನಾದಾಬನು ಬಾಳನ ಆಲಯದೊಳಕ್ಕೆ ಹೋದರು. ಯೇಹು ಬಾಳನ ಭಕ್ತರಿಗೆ, “ಯೆಹೋವನ ಸೇವಕರು ಯಾರೂ ನಿಮ್ಮೊಡನೆ ಇಲ್ಲವೆಂಬುದನ್ನು ಸುತ್ತಲೂ ನೋಡಿ ಖಚಿತಪಡಿಸಿಕೊಳ್ಳಿ. ಬಾಳನ ಭಕ್ತರಾದ ಜನರು ಮಾತ್ರ ಇಲ್ಲಿದ್ದಾರೆಂಬುದನ್ನು ಖಚಿತಪಡಿಸಿಕೊಳ್ಳಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೇಹುವೂ, ರೇಕಾಬನ ಮಗ ಯೆಹೋನಾದಾಬನೂ ಬಾಳನ ದೇವಸ್ಥಾನದಲ್ಲಿ ಪ್ರವೇಶಿಸಿದರು. ಯೇಹುವು, “ಬಾಳನನ್ನು ಸೇವಿಸುವವರ ಹೊರತು ಅವರ ಸಂಗಡ ಯೆಹೋವ ದೇವರ ಸೇವಕರಲ್ಲಿ ಒಬ್ಬನೂ ಇರದ ಹಾಗೆ ಪರಿಶೋಧಿಸಿ ನೋಡಿರಿ,” ಎಂದು ಬಾಳನನ್ನು ಸೇವಿಸುವವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:23
7 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.


ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.


ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. ಬೇರೋತ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.


ಯೇಹುವು ವಸ್ತ್ರಗಾರದ ಅಧಿಪತಿಗೆ, “ಬಾಳ್ ದೇವತೆಯನ್ನು ಸೇವಿಸುವ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು” ಎಂದು ಆಜ್ಞಾಪಿಸಿಲು ಅವನು ತಂದುಕೊಟ್ಟನು.


ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು” ಎಂಬುದಾಗಿ ಆಜ್ಞಾಪಿಸಿದ್ದನು.


ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ, ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು