Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದಹನಬಲಿಯನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ, “ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು,” ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ - ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳನ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು. ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಆ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ, ಯೇಹುವು ಕಾವಲುಗಾರರಿಗೂ, ಅಧಿಪತಿಗಳಿಗೂ, “ನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ,” ಎಂದನು. ಹಾಗೆಯೇ ಅವರು ಒಳಗೆ ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿ ಅವರ ಶವಗಳನ್ನು ಹೊರಗೆ ಹಾಕಿದ ತರುವಾಯ, ಬಾಳನ ಗರ್ಭಗುಡಿಯನ್ನು ಪ್ರವೇಶಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:25
10 ತಿಳಿವುಗಳ ಹೋಲಿಕೆ  

ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.


ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.


ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.


ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು