Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇದಲ್ಲದೆ ಬಾಳ್ ದೇವತೆಯ ವಿಗ್ರಹಸ್ತಂಭಗಳನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದಲ್ಲದೆ ಬಾಳನ ವಿಗ್ರಹಸ್ತಂಭವನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇದಲ್ಲದೆ ಅವರು ಬಾಳನ ವಿಗ್ರಹವನ್ನು ಒಡೆದುಹಾಕಿ, ಬಾಳನ ದೇವಸ್ಥಾನವನ್ನು ಕೆಡವಿಬಿಟ್ಟು, ಆ ಸ್ಥಳವನ್ನು ಇಂದಿನವರೆಗೂ ಶೌಚಕ್ಕಾಗಿ ಉಪಯೋಗಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:27
14 ತಿಳಿವುಗಳ ಹೋಲಿಕೆ  

ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.


ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.


ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.


ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.


ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.


ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಹೀಗೆ ಯೇಹುವು ಇಸ್ರಾಯೇಲರಲ್ಲಿ ಬಾಳ್ ದೇವತೆಯ ಪೂಜೆಯನ್ನು ನಿಲ್ಲಿಸಿದನು.


ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.


ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು