Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹಜಾಯೇಲನು ಬಂದು ಜೋರ್ಡನಿನ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ, ಇರುವ ಗಿಲ್ಯಾದ್, ಬಾಷಾನ್, ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್, ಮನಸ್ಸೆ ಕುಲಗಳವನ್ನೂ ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಯೇಲರನ್ನೂ ಹಿಂಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅರ್ನೊನ್‍ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್ ಬಾಷಾನ್ ಪ್ರಾಂತಗಳಲ್ಲಿ ವಾಸವಾಗಿದ್ದ ಗಾದ್ ರೂಬೇನ್ ಮನಸ್ಸೆ ಕುಲಗಳವರನ್ನೂ ಬೇರೆ ಎಲ್ಲಾ ಪ್ರಾಂತಗಳಲ್ಲಿರುವ ಇಸ್ರಾಯೇಲ್ಯರನ್ನೂ ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಹಜಾಯೇಲನು ಜೋರ್ಡನ್ ನದಿಯ ಪೂರ್ವಕ್ಕಿರುವ ಪ್ರದೇಶವನ್ನೆಲ್ಲ ಗೆದ್ದುಕೊಂಡನು. ಅವನು ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳಿಗೆ ಸೇರಿದ ಎಲ್ಲಾ ಪ್ರದೇಶವನ್ನು, ಗಿಲ್ಯಾದ್‌ನ ಎಲ್ಲಾ ಪ್ರದೇಶವನ್ನು ಗೆದ್ದನು. ಹಜಾಯೇಲನು ಆರ್ನೋನ್ ಕಣಿವೆಯಿಂದ ಗಿಲ್ಯಾದ್, ಬಾಷಾನ್‌ವರೆಗಿನ ಅರೋಯೇರ್ ಪ್ರದೇಶವನ್ನೆಲ್ಲ ಗೆದ್ದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಪೂರ್ವದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ, ರೂಬೇನ್ಯರೂ ನಿವಾಸವಾಗಿದ್ದ ಗಿಲ್ಯಾದಿನ ಸಮಸ್ತ ದೇಶವನ್ನೂ, ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಷಾನಿನಲ್ಲಿರುವವರನ್ನೂ ಹಜಾಯೇಲನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:33
9 ತಿಳಿವುಗಳ ಹೋಲಿಕೆ  

ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.


ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು.


ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.


ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.


ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು