Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋವಾಹಾಜನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರಿಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನು ಅರಸನಾದನು. ಯೇಹುವು ಸಮಾರ್ಯಪಟ್ಟಣದಲ್ಲಿದ್ದುಕೊಂಡು ಇಸ್ರಾಯೇಲ್ಯರನ್ನು ಆಳಿದ್ದು ಇಪ್ಪತ್ತೆಂಟು ವರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೇಹು ಸತ್ತುಹೋದನು. ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೇಹುವಿನ ನಂತರ ಅವನ ಮಗನಾದ ಯೇಹೋವಾಹಾಜನು ಇಸ್ರೇಲಿನ ನೂತನ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೇಹು ತನ್ನ ಪಿತೃಗಳ ಜೊತೆಯಲ್ಲಿ ವಿಶ್ರಾಂತಿ ಹೊಂದಿದ್ದರಿಂದ ಅವನನ್ನು ಸಮಾರ್ಯದಲ್ಲಿ ಹೂಳಿಟ್ಟರು. ಅವನ ಮಗ ಯೆಹೋವಾಹಾಜನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:35
11 ತಿಳಿವುಗಳ ಹೋಲಿಕೆ  

ಯೆಹೂದದ ಅರಸನೂ, ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು.


ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.


ಅವನು ಇಪ್ಪತ್ತೆರಡು ವರ್ಷ ಆಳಿ ಪೂರ್ವಿಕರ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು.


ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.


ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.


ಯೇಹುವು ಸಮಾರ್ಯ ಪಟ್ಟಣದಲ್ಲಿ ವಾಸವಾಗಿದ್ದುಕೊಂಡು ಇಸ್ರಾಯೇಲರನ್ನು ಇಪ್ಪತ್ತೆಂಟು ವರ್ಷಗಳ ಕಾಲ ಆಳಿದನು.


ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.


ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು