2 ಅರಸುಗಳು 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಯೇಹುವು ಇನ್ನೊಂದು ಪತ್ರದ ಮೂಲಕ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಲು ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ, ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ,” ಎಂದು ಆಜ್ಞಾಪಿಸಿದನು. ಎಪ್ಪತ್ತುಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ - ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಮನಸ್ಸುಳ್ಳವರಾಗಿದ್ದರೆ ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ ಎಂದು ಆಜ್ಞಾಪಿಸಿದನು. ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಂತರ ಯೇಹು ಈ ನಾಯಕರಿಗೆ ಎರಡನೆಯ ಪತ್ರವನ್ನು ಬರೆದನು. ಯೇಹುವು, “ನೀವು ನನಗೆ ಬೆಂಬಲ ಕೊಡುವುದಾದರೆ ಮತ್ತು ವಿಧೇಯರಾಗಿರುವುದಾದರೆ ಅಹಾಬನ ಮಕ್ಕಳ ತಲೆಗಳನ್ನು ಕತ್ತರಿಸಿ ಹಾಕಿ. ನಾಳೆ ಇದೇ ಸಮಯಕ್ಕೆ ಇಜ್ರೇಲಿಗೆ ನನ್ನ ಬಳಿಗೆ ಅವುಗಳನ್ನು ತನ್ನಿ.” ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವರು ತಮ್ಮ ಪಾಲಕರಾದ ನಗರದ ನಾಯಕರ ಬಳಿಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಯೇಹುವು ಅವರಿಗೆ ಎರಡನೆಯ ಸಾರಿ ಪತ್ರವನ್ನು ಬರೆದು, “ನೀವು ನನ್ನವರಾಗಿದ್ದು ನನ್ನ ಮಾತು ಕೇಳುವವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ಇಜ್ರೆಯೇಲ್ ಪಟ್ಟಣಕ್ಕೆ ನಿಮ್ಮ ಯಜಮಾನನ ಪುತ್ರರ ತಲೆಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದನು. ಆದರೆ ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮನುಷ್ಯರು ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಅವರು ಅವರನ್ನು ಪೋಷಿಸುತ್ತಿದ್ದರು. ಅಧ್ಯಾಯವನ್ನು ನೋಡಿ |