Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕಾಗಿ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಬಲಿಪೀಠದವರೆಗು, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗು, ಸಾಲಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವದಕ್ಕೋಸ್ಕರ ದೇವಾಲಯದ ದಕ್ಷಿಣದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಕಾವಲುಗಾರರು ಆಲಯದ ಬಲಗಡೆಯ ಮೂಲೆಯಿಂದ ಎಡಗಡೆಯ ಮೂಲೆಯವರೆಗೆ ತಮ್ಮ ಕೈಗಳಲ್ಲಿ ಆಯುಧಗಳನ್ನು ಹಿಡಿದುಕೊಂಡು ನಿಂತರು. ರಾಜನು ಆಲಯದೊಳಕ್ಕೆ ಹೋದಾಗ ಅವರು ಅವನ ಸುತ್ತಲೂ, ಯಜ್ಞವೇದಿಕೆಯ ಮತ್ತು ಆಲಯದ ಸುತ್ತಲೂ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು, ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:11
9 ತಿಳಿವುಗಳ ಹೋಲಿಕೆ  

ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.


ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”


ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ಸೊಲೊಮೋನನು ಎಲ್ಲಾ ಇಸ್ರಾಯೇಲರ ಸಮ್ಮುಖದಲ್ಲಿ ಯೆಹೋವನ ಯಜ್ಞವೇದಿಯ ಎದುರು ತನ್ನ ಕೈಗಳನ್ನೆತ್ತಿ ಪ್ರಾರ್ಥನಾ ಭಂಗಿಯಲ್ಲಿ ನಿಂತನು.


ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು.


ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.


ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು.


ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು