Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:14
17 ತಿಳಿವುಗಳ ಹೋಲಿಕೆ  

ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.


ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.


ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು” ಎಂದು ಹೇಳಿ ಓಡಿಹೋದನು.


ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,


ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.


ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.


ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು.


ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.


ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.


ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.


ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು