2 ಅರಸುಗಳು 11:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ವೇದಿಗಳ ಮುಂದೆಯೇ ಕೊಂದು ದೇವಸ್ಥಾನವನ್ನೂ ಅದರಲ್ಲಿದ್ದ ವೇದಿ ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳು ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಜನರೆಲ್ಲರೂ ಸುಳ್ಳುದೇವರಾದ ಬಾಳನ ಗುಡಿಗೆ ಹೋಗಿ ಬಾಳನ ವಿಗ್ರಹವನ್ನೂ ಮತ್ತು ಅವನ ಯಜ್ಞವೇದಿಕೆಯನ್ನೂ ಚೂರುಚೂರು ಮಾಡಿದರು. ಬಾಳನ ಯಾಜಕನಾದ ಮತ್ತಾನನನ್ನು ಜನರು ಯಜ್ಞವೇದಿಕೆಯ ಎದುರಿನಲ್ಲಿಯೇ ಕೊಂದುಹಾಕಿದರು. ಯಾಜಕನಾದ ಯೆಹೋಯಾದಾವನು ಯೆಹೋವನ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.