2 ಅರಸುಗಳು 11:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಬಳಿಕ ಶತಾಧಿಪತಿಗಳು, ‘ಕಾರಿ’ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು ಹಾಗು ಜನಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ, ಅರಮನೆಗೆ ಕರೆದುಕೊಂಡು ಹೋಗಿ, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟು ಶತಾಧಿಪತಿಗಳು, ಕಾರಿ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು, ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಕಾವಲುದಂಡಿನವರ ಬಾಗಲಿನ ಮಾರ್ಗವಾಗಿ ಅರಮನೆಗೆ ಕರಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯಾಜಕನು ಜನರನ್ನೆಲ್ಲ ಕರೆದುಕೊಂಡು ಹೋದನು. ಅವರು ಸಿಪಾಯಿಗಳ ದ್ವಾರದ ಮೂಲಕ ಅರಮನೆಗೆ ಹೋದರು. ರಾಜನ ವಿಶೇಷ ಅಂಗರಕ್ಷಕರು ಮತ್ತು ಸೇನಾಧಿಪತಿಗಳು ರಾಜನ ಜೊತೆಯಲ್ಲಿ ಹೋದರು. ಅವರನ್ನು ಇತರ ಜನರೆಲ್ಲರೂ ಹಿಂಬಾಲಿಸಿದರು. ಅವರು ರಾಜನ ಅರಮನೆಯ ಬಾಗಿಲಿಗೆ ಹೋದರು. ನಂತರ ರಾಜನಾದ ಯೆಹೋವಾಷನು ಸಿಂಹಾಸನದ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ಅಧ್ಯಾಯವನ್ನು ನೋಡಿ |