2 ಅರಸುಗಳು 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಹತವಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು. ಅಧ್ಯಾಯವನ್ನು ನೋಡಿ |
ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.