Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೀಗೆ ಅವನು ಅತಲ್ಯಳಿಂದ ಹತವಾಗದೆ ತಪ್ಪಿಸಿಕೊಂಡು, ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಸರ್ವೇಶ್ವರನ ಆಲಯದಲ್ಲಿದ್ದನು. ಈ ಆರು ವರ್ಷಗಳಲ್ಲಿ ಅತಲ್ಯಳೇ ನಾಡನ್ನು ಆಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಲ್ಪಟ್ಟು ಆರು ವರುಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಈ ಆರು ವರುಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಂತರ ಯೆಹೋವಾಷ ಮತ್ತು ಯೆಹೋಷೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೂದ ದೇಶವನ್ನು ಆಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:3
7 ತಿಳಿವುಗಳ ಹೋಲಿಕೆ  

ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.


ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.


ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.


ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು


ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.


ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು.


ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು