Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋಯಾದಾವನು ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನಂತರ ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗ ಅರಮನೆಯನ್ನು ಕಾಯಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ರಾಜಕುಮಾರನನ್ನು ತೋರಿಸಿ ಅವರಿಗೆ - ಸಬ್ಬತ್‍ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ಅರಮನೆಯನ್ನು ಕಾಯಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋಯಾದಾವನು ಅವರಿಗೆ, “ನೀವು ಈ ಕಾರ್ಯವನ್ನು ಮಾಡಲೇಬೇಕು. ನಿಮ್ಮಲ್ಲಿ ಸಬ್ಬತ್‌ದಿನದಂದು ಬರುವ ಮೂರನೆ ಒಂದು ಭಾಗದ ಜನರು ರಾಜನನ್ನು ಅವನ ಅರಮನೆಯಲ್ಲಿ ರಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರಿಗೆ, “ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ಅರಮನೆಯ ಕಾವಲುಗಾರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:5
12 ತಿಳಿವುಗಳ ಹೋಲಿಕೆ  

ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು.


ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.


ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.


ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.


ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.


ಮೂರರಲ್ಲೊಂದು ಭಾಗವು ಸೂರ್ ಬಾಗಿಲಿನಲ್ಲಿಯೂ, ಮತ್ತೊಂದು ಭಾಗವು ಕಾವಲುದಂಡಿನ ಹಿಂದಿನ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು