Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು, ಅವನ ಸುತ್ತಲೂ ನಿಂತು, ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು; ಇದು ನನ್ನ ಅಪ್ಪಣೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು, ಇದೇ ನನ್ನ ಅಪ್ಪಣೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಜನಾದ ಯೆಹೋವಾಷನು ಎಲ್ಲಿಗಾದರೂ ಯಾವಾಗಲಾದರೂ ಹೋದರೆ ಅವನೊಂದಿಗೆ ನೀವು ಇರಲೇಬೇಕು. ನೀವೆಲ್ಲರೂ ರಾಜನನ್ನು ಸುತ್ತುವರಿದಿರಬೇಕು. ಪ್ರತಿಯೊಬ್ಬ ಕಾವಲುಗಾರನೂ ಆಯುಧವನ್ನು ತನ್ನ ಕೈಯಲ್ಲಿ ಹಿಡಿದಿರಲೇಬೇಕು. ನಿಮ್ಮ ಸಮೀಪಕ್ಕೆ ಯಾರಾದರೂ ಬಂದರೆ ಅವರನ್ನು ಕೊಲ್ಲಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಯಾವನಾದರೂ ನಿಮ್ಮ ಸಾಲುಗಳಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಆದರೆ ಅರಸನು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:8
7 ತಿಳಿವುಗಳ ಹೋಲಿಕೆ  

ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು” ಎಂದು ಹೇಳಿದನು.


ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.


ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.


ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.


“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.


ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು