Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯೆಹೋವಾಷನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವಾಷನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಷನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೋವಾಷನ ಇತರ ಕಾರ್ಯಗಳು, ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:19
10 ತಿಳಿವುಗಳ ಹೋಲಿಕೆ  

ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ರೆಹಬ್ಬಾಮನ ಉಳಿದ ಚರಿತ್ರೆಯು ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ, ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರೆ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು.


ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು