Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರಲ್ಲಿ ಶಿಮೆಯಾತನ ಮಗ ಯೋಜಾಕಾರ್, ಶೋಮೇರನ ಮಗ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗುಟ್ಟಾದ ದಾರಿಯಲ್ಲಿರುವ ಮಿಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೇರನ ಮಗನಾದ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗಟ್ಟದ ದಾರಿಯಲ್ಲಿರುವ ವಿುಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಕುಟುಂಬಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋಜಾಬಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು. ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:21
12 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.


ಯೆಹೂದದ ಅರಸನೂ, ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು.


ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.


ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.


ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.


ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.


ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?


ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೇ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆ ವಿಧಿಸಿದನು.


ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.


ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು