Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು, ಅದರ ಮುಚ್ಚಳದಲ್ಲಿ ತೂತುಮಾಡಿ, ಅದನ್ನು ಸರ್ವೇಶ್ವರನ ಆಲಯದ ಬಾಗಿಲಿನ ಬಲಗಡೆಯಲ್ಲಿ, ಬಲಿಪೀಠದ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತುಮಾಡಿ ಅದನ್ನು ಯೆಹೋವನ ಆಲಯದ ಬಾಗಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಅದರ ಮೇಲೆ ಒಂದು ರಂಧ್ರ ಮಾಡಿದನು. ನಂತರ ಯೆಹೋಯಾದಾವನು ಆ ಪೆಟ್ಟಿಗೆಯನ್ನು ಯಜ್ಞವೇದಿಕೆಯ ಬಲಗಡೆಯಲ್ಲಿ ಇಟ್ಟನು. ದೇವಾಲಯಕ್ಕೆ ಜನರು ಬರುವ ಬಾಗಿಲಿನಲ್ಲಿ ಈ ಪೆಟ್ಟಿಗೆಯಿತ್ತು. ಕೆಲವು ಮಂದಿ ಯಾಜಕರು ಆಲಯದ ಬಾಗಿಲಿನಲ್ಲಿ ರಕ್ಷಕರಾಗಿ ನಿಂತರು. ಆ ಯಾಜಕರು ಜನರು ಯೆಹೋವನಿಗೆಂದು ಕೊಡುವ ಆ ಹಣವನ್ನು ಪೆಟ್ಟಿಗೆಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಅದರ ಮುಚ್ಚಳದಲ್ಲಿ ಒಂದು ರಂಧ್ರವನ್ನು ಮಾಡಿದನು. ಅವನು ಅದನ್ನು ಬಲಿಪೀಠದ ಬಳಿಯಲ್ಲಿ ಯೆಹೋವ ದೇವರ ಆಲಯ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಿಲು ಕಾಯುವ ಯಾಜಕರು ಯೆಹೋವ ದೇವರ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿ ಹಾಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:9
12 ತಿಳಿವುಗಳ ಹೋಲಿಕೆ  

ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.


ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.


ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.


ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.


ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,


ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,


ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


“ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,


ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು