Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಂದು ದಿನ, ಜನರು ಒಬ್ಬ ಸತ್ತವನನ್ನು ಸಮಾಧಿ ಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು, ಶವವನ್ನು ಎಲೀಷನ ಸಮಾಧಿಯಲ್ಲೆ ಬಿಸಾಡಿ ಓಡಿಹೋದರು. ಸತ್ತ ವ್ಯಕ್ತಿಯ ಶವ ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ, ಆ ವ್ಯಕ್ತಿ ಉಜ್ಜೀವಿಸಿ ಎದ್ದುನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಂದು ದಿವಸ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವದಕ್ಕೆ ಹೋದಾಗ ಮೋವಾಬ್ಯರ ಗುಂಪು ಬರುತ್ತಿರುವದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿ ಹೋದರು. ಸತ್ತ ಮನುಷ್ಯನು ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ ಉಜ್ಜೀವಿಸಿ ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸ್ರೇಲರಲ್ಲಿ ಕೆಲವರು ಸತ್ತವನೊಬ್ಬನನ್ನು ಸಮಾಧಿ ಮಾಡುತ್ತಿರುವಾಗ ಸೈನಿಕರ ಆ ಗುಂಪನ್ನು ನೋಡಿ ಸತ್ತವನನ್ನು ಎಲೀಷನ ಸಮಾಧಿಯಲ್ಲಿ ಎಸೆದು ಓಡಿಹೋದರು. ಎಲೀಷನ ಮೂಳೆಗಳನ್ನು ಸತ್ತವನು ಸ್ಪರ್ಶಿಸಿದ ತಕ್ಷಣ, ಸತ್ತ ಮನುಷ್ಯನಿಗೆ ಜೀವ ಬಂದು, ಅವನು ತನ್ನ ಕಾಲುಗಳ ಮೇಲೆ ನಿಂತುಕೊಂಡನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಂದು ದಿನ ಕೆಲವು ಇಸ್ರಾಯೇಲರು ಒಬ್ಬ ಮನುಷ್ಯನನ್ನು ಸಮಾಧಿಮಾಡಲು ಹೋಗುತ್ತಿದ್ದರು. ಆಗ, ಮೋವಾಬ್ಯರ ದಂಡು ಬರುತ್ತಿರುವುದನ್ನು ಕಂಡು, ಆ ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಆ ಶವ ಸಮಾಧಿಯ ಮೇಲೆಬಿದ್ದಾಗ, ಅದು ಎಲೀಷನ ಎಲುಬುಗಳಿಗೆ ತಗಲಿ ಜೀವ ಬಂದು ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:21
11 ತಿಳಿವುಗಳ ಹೋಲಿಕೆ  

ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.


ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.


ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.


ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು