Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್ ಇಸಾಕ್ ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಸಿ ಅವರಿಗೆ ದಯೆತೋರಿಸಿದನು; ಕರುಳು ಮರುಗಿದವನಾಗಿ ಅವರಿಗೆ ಪ್ರಸನ್ನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:23
36 ತಿಳಿವುಗಳ ಹೋಲಿಕೆ  

ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.


ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು.


ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.


ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.


ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.


ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.


ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.


ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.


ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.


ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು.


ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,


ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.


ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.


ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು