Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನ ಮುಖಾಂತರವಾಗಿ ಅವರು ಸಿರಿಯಾದವರ ಕೈಯಿಂದ ಬಿಡುಗಡೆಯಾಗಿ, ಮುಂದಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಇವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮುಂಚಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಇಸ್ರಾಯೇಲರಿಗೆ ಒಬ್ಬ ವಿಮೋಚಕನನ್ನು ಕೊಟ್ಟಿದ್ದರಿಂದ, ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಆಗ ಇಸ್ರಾಯೇಲರು ಮುಂಚಿನ ಹಾಗೆ ತಮ್ಮ ಮನೆಗಳಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:5
13 ತಿಳಿವುಗಳ ಹೋಲಿಕೆ  

ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.


ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು.


ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.


ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.


ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.


ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.


ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.


ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.


ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.


ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು