Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಜನರನ್ನು ಭೂಲೋಕದಿಂದ ನಿರ್ನಾಮಮಾಡುವುದಕ್ಕೆ ಮನಸ್ಸಿಲ್ಲದೆ, ಯೋವಾಷನ ಮಗ ಯಾರೊಬ್ಬಾಮನ ಮುಖಾಂತರ ಅವರನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರನ್ನು ಭೂಲೋಕದಿಂದ ನಿರ್ನಾಮ ಮಾಡುವದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈ ಲೋಕದಿಂದ ಇಸ್ರೇಲರ ಹೆಸರನ್ನೇ ತಾನು ಅಳಿಸಿಹಾಕುತ್ತೇನೆಂದು ಯೆಹೋವನು ಹೇಳಿರಲಿಲ್ಲ. ಆದ್ದರಿಂದ ಇಸ್ರೇಲಿನ ಜನರನ್ನು ರಕ್ಷಿಸಲು ಯೆಹೋವನು ಯೋವಾಷನ ಮಗನಾದ ಯಾರೊಬ್ಬಾಮನನ್ನು ಉಪಯೋಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನೆಂದು ಯೆಹೋವ ದೇವರು ಹೇಳದೇ ಇದ್ದುದರಿಂದ, ಯೋವಾಷನ ಮಗ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:27
13 ತಿಳಿವುಗಳ ಹೋಲಿಕೆ  

ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.


ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.


ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.


ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.


ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.


ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.


ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು