2 ಅರಸುಗಳು 14:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯಾರೊಬ್ಬಾಮನ ಉಳಿದ ಚರಿತ್ರೆ, ಅವನು ಯುದ್ಧದಲ್ಲಿ ನಡೆಸಿದ ಶೂರಕಾರ್ಯ ಮತ್ತು ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಇವನಿಂದ ಇಸ್ರಯೇಲ್ ರಾಜ್ಯಕ್ಕೆ ವಶವಾದ ವಿವರ, ಇವೆಲ್ಲವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯಾರೊಬ್ಬಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಅವನ ಪರಾಕ್ರಮವೂ, ಅವನ ಯುದ್ಧಗಳೂ, ಯೆಹೂದಕ್ಕೆ ಸೇರಿದ ದಮಸ್ಕವನ್ನೂ, ಹಮಾತನ್ನೂ ಇಸ್ರಾಯೇಲಿಗೋಸ್ಕರ ಹಿಂದಿರುಗಿ ತೆಗೆದುಕೊಂಡದ್ದೂ, ಇಸ್ರಾಯೇಲಿನ ಅರಸುಗಳ ದಿನಚರ್ಯೆಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿ |