2 ಅರಸುಗಳು 14:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೋಶೆಯ ಧರ್ಮನಿಯಮಗ್ರಂಥದಲ್ಲಿರುವ ಯೆಹೋವನ ಅಪ್ಪಣೆಯಂತೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ, ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು” ಎಂಬುದನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪದ ನಿಮಿತ್ತ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು,” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಆಜ್ಞೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು ಎಂಬದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆತಾಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆತಾಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಅಧ್ಯಾಯವನ್ನು ನೋಡಿ |